National

*ಮೂರು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿ ಎನ್ ಕೌಂಟರ್ ನಲ್ಲಿ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮೂರು ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಕೃತ್ಯದ ಬಳಿಕ ಬಾಲಕಿಯನ್ನು ಮೆಟ್ರೋ ಸೇತುವೆಯಿಂದ ಎಸೆದು ಹೋಗಿದ್ದಾರೆ.

Related Articles

ಈ ಘಟನೆ ಉತ್ತರ ಪ್ರದೇಶದ ಲಖನೌನ ಆಲಂಬಾಗ್ ಪ್ರದೇಶದಲ್ಲಿ ನಡೆದಿದೆ. ಮಗು ಮನೆ ಬಳಿ ಕಾಣದಿದ್ದಾಗ ಪೋಷಕರು ಕಂಗಾಲಾಗಿ ಹುಡುಕಾಟ ನಡೆಸಿದಾಗ ಆಲಂಬಾಗ್ ಮೆಟ್ರೋ ಸೇತುವೆ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಆಲಂಬಾಗ್ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಬಗ್ಗೆ ಸುಳಿವು ನೀಡಿದರೆ 1 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದರು.

Home add -Advt

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಇದೀಗ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡುವ ಮೂಲಕ ತಕ್ಕ ಶಾಸ್ತಿ ಮಾಡಿದ್ದಾರೆ. ಆಲಂಬಾಗ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಆರೋಪಿಯನ್ನು ಎನ್ ಕೌಂಟರ್ ನಲ್ಲಿ ಕೊಲ್ಲಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ.

Related Articles

Back to top button