ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಿಂದಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವರ ಅರಗ ಜ್ಞಾನೇಂದ್ರ ಸೂಚಿಸಿದ್ದಾರೆ.
ಮೀರಜ್-ಕಾಗವಾಡ ಮಾರ್ಗದಲ್ಲಿ ಕೆ ಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನ್ನಲ್ಲೇ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮಹಾರಾಷ್ಟ್ರದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಈ ನಡುವೆ ಮೀರಜ್-ಕಾಗವಾಡ ಮಾರ್ಗದಲ್ಲಿ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ಪೊಲೀಸರು ಬಸ್ ಸಂಚಾರ ಸ್ಥಗಿತಗೊಳಿಸಿದ್ದು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಗೃಹ ಸಚಿವ ಅರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚ ವಹಿಸುವಂತೆ ಸೂಚಿಸಿದ್ದಾರೆ. ಶಾಂತಿ ಕಾಪಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಶೀಘ್ರದಲ್ಲಿಯೇ ಎರಡೂ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾತುಕತೆ ನಡೆಸಲು ಉದ್ದೇಶಿಸಿರುವುದಾಗಿ ತಿಳಿದುಬಂದಿದೆ.
ಎರಡೂ ರಾಜ್ಯದ ಜನತೆ ಶಾಂತಿಯಿಂದಿರಬೇಕು; ಸಿಎಂ ಬೊಮ್ಮಾಯಿ ಕರೆ
https://pragati.taskdun.com/karnataka-maharashtra-border-issuevoter-id-scamcm-basavaraj-bommaireaction/
ಕಿತವಾಡ ಫಾಲ್ಸ್ ನಲ್ಲಿ ದುರಂತ; ನಾಲ್ವರು ಯುವತಿಯರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ