Belagavi NewsBelgaum News

*ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದಿಂದ ತಮಿಳುನಾಡಿನವರೆಗೆ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ವರದಿಯ ಪ್ರಕಾರ, ವಾಯುಭಾರ ಕುಸಿತದಿಂದಾಗಿ ಬೆಳಗಾವಿ, ಬೀದ‌ರ್, ಧಾರವಾಡ, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button