ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವೆಡೆಗಳಲ್ಲಿ ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಮೇಲೂ ಪರಿಣಾಮ ಬೀರಿದ್ದು, ಇಂದು ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈಗಾಗಲೇ ತಮಿಳುನಾಡು ಹಾಗೂ ಕೇರಳದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿತ್ರಾ ರಾಮಕೃಷ್ಣ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ