Kannada NewsKarnataka NewsLatestPolitics

*ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಗೆ ಬಿಗ್ ಶಾಕ್: ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಎಂ.ಕೆ .ಪ್ರಾಣೇಶ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

Home add -Advt

ನಾಮನಿರ್ದೇಶಿತ ಸದಸ್ಯರ ಮತ ಅಸಿಂಧುಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ವಿಜೇತರಾಗಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಂ.ಕೆ.ಪ್ರಾಣೇಶ್ ಆರು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಅವರು ಚುನಾವಣೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದರು. ಮೂರು ಸ್ಥಳೀಯ ಪಟ್ಟಣ ಪಂಚಾಯತ್ ನ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು,. ಆದರೆ ಅವರಿಗೆ ಮತದಾನಕ್ಕೆ ಅವಕಾಶವಿರಲಿಲ್ಲ ಎಂದು ಗಾಯತ್ರಿ ದೂರಿದ್ದರು. ಗಾಯತ್ರಿ ಅವರ ವಾದ ಆಲಿಸಿದ ಹೈಕೋರ್ಟ್ 12 ಸದಸ್ಯರ ಮತಗಳನ್ನು ಪ್ರತ್ಯೇಕವಾಗಿರಿಸಿ ಮತಗಳ ಮರು ಎಣಿಕೆಗೆ ಸೂಚನೆ ನೀಡಿತ್ತು.

ಅದರಂತೆ 2025ರ ಫೆ.28ರಂದು ಮರು ಎಣಿಕೆ ನಡೆದಿದ್ದು ಮುಚ್ಚಿದ ಲಕೋಟೆಯಲ್ಲಿ ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ಮಧ್ಯೆ ಮತ ಮರು ಎಣಿಕೆಗೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಪ್ರಾಣೇಶ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪನ್ನು ಜಾರಿ ಮಾಡಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಗಾಯತ್ರಿ ಶಾಂತೇಗೌಡ ಅವರ ಅರ್ಜಿ ವಿಚಾರಣೆ ಇಂದು ನಡೆದಿದ್ದು, ಎಂ.ಕೆ.ಪ್ರಾಣೇಶ್ ಆಯ್ಕೆ ರದ್ದುಗೊಳಿಸಿ ನ್ಯಾಯ ಪೀಠ ತೀರ್ಪು ನೀಡಿದೆ. ಗಾಯತ್ರಿ ಶಾಂತೇಗೌಡ ವಿಜೇತರಾಗಿದ್ದಾರೆ.

Related Articles

Back to top button