Cancer Hospital 2
Bottom Add. 3

*ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ; ಖಾನಾಪುರ: ತಾಲ್ಲೂಕಿನ ಬೇಕವಾಡ ಗ್ರಾಮದ ಬಳಿ ಬೆಳಗಾವಿ-ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಹೊರಟಿದ್ದ ಕಬ್ಬು ಸಾಗಿಸುವ ಟ್ರ್ಯಾಕ್ಟರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಪಟ್ಟಣದ ಹೊರವಲಯದ ಲೈಲಾ ಶುಗರ್ಸ್ ಕಾರ್ಖಾನೆಯಿಂದ ಬೀಡಿ ಗ್ರಾಮದತ್ತ ಹೊರಟ್ತಿದ್ದ ಟ್ರ್ಯಾಕ್ಟರ್ ಹಡಲಗಾ ಗ್ರಾಮದಿಂದ ಬೀಡಿಯತ್ತ ಹೊರಟಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಅಪ್ಪಳಿಸಿದ್ದರಿಂದ ದ್ವಿಚಕ್ರ ವಾಹನ ಸವಾರ, ಹಡಲಗಾ ನಿವಾಸಿ ನಾರಾಯಣ ಕಲ್ಲಪ್ಪ ಔವುಳಕರ (75) ಸ್ಥಳದಲ್ಲೇ ಮೃತಪಟ್ಟರು. ಹಿಂಬದಿ ಸವಾರ ಬೇಕವಾಡ ಗ್ರಾಮದ ಮರ್ಯಪ್ಪ ಪಾಟೀಲ (72) ಅವರಿಗೆ ಗಂಭೀರವಾದ ಗಾಯಗಳಾಗಿವೆ.

ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿದ್ದಾರೆ. ನಂದಗಡ ಠಾಣೆಯಲ್ಲಿ ಟ್ರ್ಯಾಕ್ಟರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Bottom Add3
Bottom Ad 2

You cannot copy content of this page