
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಿತ್ತೂರು ಮತ್ತು ಖಾನಾಪುರ ತಾಲೂಕೂಗಳ ಗಡಿಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಖಾನಾಪುರ ತಾಲೂಕಿನ ಗಾಡಿಕೊಪ್ಪ, ಹಿರೇಹಟ್ಟಿಹೊಳಿ, ಬೆಳಗಾವಿ ತಾಲೂಕಿನ ಕುಕಡೊಳ್ಳಿ, ಕಿತ್ತೂರು ತಾಲೂಕಿನ ಅಮರಾಪುರ, ವೀರಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಎರಡು ಕಾಡು ೋಣಗಳು ಪ್ರತ್ಯಕ್ಷವಾಗಿ ಆತಂಕ ಮೂಡಿಸಿವೆ.
ಅರಣ್ಯಪ್ರದೇಶ ದಿಂದ ದೂರವಿರುವ ಮತ್ತು ಬಹುಪಾಲು ಕಬ್ಬು ಮತ್ತು ತರಕಾರಿ ಬೆಳೆಗಳನ್ನು ಹೊಂದಿರುವ ಈ ಭಾಗದಲ್ಲಿ ಕಾಣಿಸಿಕೊಂಡ ಕಾಡುಕೋಣಗಳನ್ನು ಮರಳಿ ಅರಣ್ಯ ಪ್ರದೇಶಕ್ಕೆ ಓಡಿಸುವಂತೆ ರೈತರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ