*ಭೂಮಿ ಉಳಿವಿಗೆ ಒತ್ತಾಯಿಸಿ ತೀವ್ರಗೊಂಡ ಪ್ರತಿಭಟನೆ; ರೈತರು, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಇಬ್ಬರು ಮಕ್ಕಳಿಗೆ ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭೂಮಿ ಉಳಿವಿಗಾಗಿ ಆಗ್ರಹಿಸಿ ಕಿತ್ತೂರು ಕಲವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಗ್ರಾಮಗಳ ರೈತರು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಊಳುವವನೇ ಭೂಮಿಯ ಒಡೆಯ ಯೋಜನೆಯಡಿ ಭೂಮಿ ಪಡೆದಿದ್ದ ರೈತರು ಜಮೀನು ಹಕ್ಕು ಪತ್ರಕ್ಕಾಗಿ ಆಗ್ರಹಿಸಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಕುಟುಂಬ ಹಾಗೂ ದನಕರುಗಳ ಸಮೇತ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಕಂದಾಯ ಸಚಿವರು ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದು, ರಸ್ತೆ ತಡೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ರೈತರ ಹಾಗೂ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ರೈತರು ಹಾಗೂ ವಿದ್ಯಾರ್ಥಿಗಳು ಪೊಲೀಸರ ಮಾತು ಕೇಳದೇ ಧರಣಿ ಮುಂದುವರೆಸಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಪ್ರತಿಭಟನಾಕರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಲಾಠಿ ಏಟಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ