
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗ್ಗೆ ಕರ್ತವ್ಯಕ್ಕೆ ತೆರಳುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಮೆದಳು ನಿಷ್ಕ್ರಿಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 57 ವರ್ಷದ ವ್ಯಕ್ತಿಯು ತನ್ನ ಅಂಗಾಂಗಳನ್ನು ದಾನ ಮಾಡಿ 3 ಜನರ ಜೀವ ಉಳಿಸಿ, ಇಬ್ಬರು ಅಂದರ ಬಾಳಿಗೆ ಬೆಳಕಾಗಿ, ಸಮಾಜಕ್ಕೆ ಮಾದರಿಯಾಗಿದ್ದಾರೆ.
ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಿದರೆ, ಎರಡೂ ಕಿಡ್ನಿಗಳನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಪೊಲೀಸರು ಅಂಗಾಂಗಳನ್ನು ಸ್ಥಳಾಂತರಿಸಲು ಟ್ರಾಫಿಕ್ ನಿರ್ವಹಣೆ ಮೂಲಕ ಸಹಕಾರ ನೀಡಿದರು.
ಬೆಳಗಾವಿ ಸಮೀಪದ ಪಂತಬಾಳೆಕುಂದ್ರಿ ನಿವಾಸಿ ಏರ್‌ಫೋರ್ಸ್ ನ ಸಿಬ್ಬಂದಿಯಾದ ಚಿದಾನಂದ ಯಚರಪ್ಪ ಪತ್ತಾರ (57) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಮೆದುಳಿಗೆ ತೀವ್ರತರವಾದ ಗಾಯವಾದ್ದರಿಂದ ಚಿಕಿತ್ಸೆಗೆ ಸ್ಪಂಧಿಸದೇ ನಿಷ್ಕ್ರಿಯಗೊಂಡು ತನ್ನ ಕಾರ್ಯವನ್ನು ನಿಲ್ಲಿಸಿದ್ದರು. ಆದರೆ ಅಂಗಾಂಗಳು ಕಾರ್ಯನಿರ್ವಹಿಸುತ್ತಿದ್ದವು.
ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಮಕ್ಕಳು, ಪತ್ನಿ ಹಾಗೂ ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ, ನಿಮ್ಮ ವ್ಯಕ್ತಿ ನೀಡುವ ಅಂಗಾಂಗಳಿಂದ ಇನ್ನೊಬ್ಬರ ಜೀವ ಉಳಿಯುತ್ತದೆ ಎಂದು ಹೇಳಿದಾಗ, ಸ್ವಇಚ್ಚೆಯಿಂದ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿದರು.
ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಹೃದಯವನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಗೆ ಕಸಿ ಮಾಡುವಲ್ಲಿ ಇಲ್ಲಿನ ವೈದ್ಯರು ನಿರತರಾದರೆ, ಕಿಡ್ನಿಗಳನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಕಣ್ಣುಗಳನ್ನು ದಾನ ಮಾಡಿದರು. ಕಣ್ಣುಗಳನ್ನು ಇಬ್ಬರು ಅಂಧರಿಗೆ ಕಸಿ ಮಾಡಲಾಗುತ್ತದೆ. ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಮೃತಪಟ್ಟರೂ ಕೂಡ 3 ಜನರ ಜೀವ ಉಳಿಸಿದ ಸಾರ್ಥಕತೆ ಮೆರೆದರು.
ಬೆಳಗಾವಿ ಹಾಗೂ ಹುಬ್ಬಳ್ಳಿ ಪೊಲೀಸರು ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಅಂಗಾಂಗಳನ್ನು ಶೀಘ್ರ ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.
ಅಂಗಾಂಗಳನ್ನು ದಾನ ಮಾಡಿದ ವ್ಯಕ್ತಿ ಹಾಗೂ ಆತನ ಕುಟುಂಬ ಸದಸ್ಯರ ಕಾರ್ಯವನ್ನು ಸಂಸ್ಥೆಯ ಕರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ, ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಕರ್ನಲ್ ಡಾ. ಎಂ. ದಯಾನಂದ ಹಾಗೂ ಡಾ. ಎಂ ವಿ ಜಾಲಿ ಅವರು ಅಭಿನಂದಿಸಿದ್ದಾರೆ.
ಭೂಮಿತೂಕದ ತಾಳ್ಮೆಯುಳ್ಳ ಸ್ತ್ರೀ ಒಂದು ಪ್ರಬಲ ಶಕ್ತಿ – ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ