Kannada NewsLatest

ರಾಮದುರ್ಗ: ಚಾಕು ಇರಿತ, ರಾಡ್ ನಿಂದ ಹಲ್ಲೆ, ನಾಲ್ವರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಶ್ರೀರಾಮಸೇನೆಯ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಒಟ್ಟೂ ನಾಲ್ವರು ಗಾಯಗೊಂಡಿದ್ದಾರೆ.

ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ಕಾರಣಕ್ಕೆ ಜಗಳ ಆರಂಭವಾಗಿದ್ದು, ಈ ವೇಳೆ ಒಂದು ಗುಂಪು ಇನ್ನೊಂದು ಗುಂಪಿನ ಯುವಕರ ಮೇಲೆ ಚಾಕು, ರಾಡ್ ನಿಂದ ಹಲ್ಲೆ ನಡೆಸಿದೆ.  ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲ ಬಂಡಿವಡ್ಡರ್ ಗೆ ಚಾಕು ಇರಿಯಲಾಗಿದ್ದು,  ರವಿ ಬಂಡಿವಡ್ಡರ್ ತಲೆಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.

Home add -Advt

ಜಗಳ ಬಿಡಿಸಲೆಂದು ಹೋದ ನಂಜುಂಡಿ ಸಾಬಣ್ಣ ಬಂಡಿವಡ್ಡರ್ ಎಂಬುವವರ ಮೇಲೂ ಹಲ್ಲೆಗೆ ಯತ್ನ ನಡೆದಿದೆ. ಅಮೀನ್ ಜಂಗಲಶೇಖ್ ಕಣ್ಣಿಗೆ ಗಾಯವಾಗಿದೆ.

 ಘರ್ಷಣೆಯ ಹಿನ್ನೆಲೆಯಲ್ಲಿ ರಾಮದುರ್ಗ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
  ಗಾಯಾಳುಗಳನ್ನು  ರಾಮದುರ್ಗ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
  ಬೈಕ್ ಪಕಕ್ಕೆ ಸರಿಸುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತು.
ಒಂದು ಗುಂಪಿನ ಐದಕ್ಕೂ ಅಧಿಕ ಯುವಕರು ಚಾಕು, ರಾಡ್, ಕಲ್ಲಿನಿಂದ ಮತ್ತೊಂದು  ಗುಂಪಿನ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ.  ಅಮೀನ್ ಜಂಗಲಶೇಖ್ ಮತ್ತು ಸಹಚರರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದಾರೆ.
ಶಾಸಕ ಮಹಾದೇವಪ್ಪ ಯಾದವಾಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ತಪ್ಪಿತಸ್ಥರ ಮೇಲೆ ಬಿಗಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಇದೊಂದು ವಯಕ್ತಿಕ ಕಾರಣಕ್ಕೆ ನಡೆದ ಗಲಾಟೆಯಾಗಿದ್ದು, ಜಾತಿ, ಕೋಮಿಗೆ ಸಂಬಂಧವಿಲ್ಲ ಎಂದು ಎಸ್ಪಿ ಸಂಜೀವ್ ಪಾಟೀಲ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆಗೆ ಕವಡೆಕಾಸಿನ ಕಿಮ್ಮತ್ತಿಲ್ಲ; ಬಿಎಸ್ ವೈ ವಾಗ್ದಾಳಿ

https://pragati.taskdun.com/politics/b-s-yedyurapparahul-gandhibharath-jodo-yatre/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button