
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ. ಇಂದು ಆಯುಧ ಪೂಜೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ನಿವಾಸದಲ್ಲಿ ವಾಹನಗಳಿಗೆ ಪೂಜೆಯನ್ನು ಸಲ್ಲಿಸಿದರು.

ಇದೇ ಸಮಯದಲ್ಲಿ ಕಚೇರಿಯ ಎಲ್ಲ ಸಿಬ್ಬಂದಿಗೆ ಮಹಾನವಮಿ ಹಾಗೂ ಆಯುಧ ಪೂಜೆಯ ಶುಭ ಕೋರಿದರು.