Sports

*ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್*

ಪ್ರಗತಿವಾಹಿನಿ ಸುದ್ದಿ: ಸೌಥ್ ಆಫ್ರಿಕಾ ವಿರುದ್ಧದ ಟಿ20 ಸರಣಿ ಗೆದ್ದ ಬಳಿಕ ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್  ಕುಟುಂಬ ಸಮೇತ ರಾಜ್ಯದ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ

ಸೂರ್ಯಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಸೇರಿದಂತೆ ಕುಟುಂಬಸ್ಥರ ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೂರ್ಯಕುಮಾರ್‌ ಯಾದವ್ ದಂಪತಿ ಇಲ್ಲಿನ ಶ್ರೀಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ, ಹಾಗೂ ನಾಗ ಪ್ರತಿಷ್ಠಾಪನ ಪೂಜೆಯನ್ನು ನೆರವೇರಿಸಿದರು.

Related Articles

Related Articles

Back to top button