
ಪ್ರಗತಿವಾಹಿನಿ ಸುದ್ದಿ: ಕುಡಿಯುವ ನೀರಿನ ಯೋಜನೆ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಕನಕದಾಸ ಸರ್ಕಲ್ ನಲ್ಲಿ ಈ ದುರಂತ ಸಂಭವಿಸಿದೆ. L&T ಕಂಪನಿಯಿಂದ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿತಗೊಂಡಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಬಸವರಾಜ್, ಶಿವಲಿಂಗ ಮೃತರು.
ಬೆಳಗಾವಿ ಮಾಳಮಾರುತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.