
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಯೂರಿಯಾ ಚೀಲದಲ್ಲಿ ವಿವಿಧ ರೀತಿಯ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು 43.5 ಲೀಟರ ಅಂದಾಜಿನ ಸುಮಾರು 16848 ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.
ಪಿಐ ಘಟಪ್ರಭಾ ರವರು ಹಾಗೂ ಅವರ ಸಿಬ್ಬಂದಿ ಜನರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ರೇಡ್ ಮಾಡಿ ಜಪ್ತಿ ಮಾಡಿಕೊಂಡಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ