
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 684 ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಟ ಬಳಿ ನಡೆದಿದೆ.
ಬೆಳಗಾವಿ ಉಪ ವಿಭಾಗ ಹಾಗೂ ತನಿಖಾ ಠಾಣೆಯ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಅಶೋಕಾ ಲೈಲ್ಯಾಂಡ್ ಕಂಪನಿಯ ಎಸಿ ಬಸ್ ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಗೊತ್ತಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಆಂಧ್ರಪ್ರದೇಶ ಮೂಲದ ದಿಲೀಪ್ ಕುಮಾರ್ ಹಾಗೂ ಗುಂಡಪ್ಪ ನೇನೆ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 684 ಮದ್ಯದ ಬಾಟಲ್ ಹಾಗೂ ಬಸ್ ನ್ನು ಜಪ್ತಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ