
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ನಾಯಕರು ಮತದಾರರಿಗೆ ಪ್ರಧಾನಿ ಮೋದಿ ಭಾವಚಿತ್ರದ ಚೀಟಿ ನೀಡಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಹೇಳಿ ಪ್ರಚೋದಿಸುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ವೈಭವ ನಗರದ ವಾರ್ಡ್ ನಂಬರ್ 45ರಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಬಿಜೆಪಿ ನಾಯಕರು ಮತದಾನ ನಡೆಯುತ್ತಿರುವ ಸಂದರ್ಭದಲ್ಲೂ ಮತದಾರರನ್ನು ಸೆಳೆಯಲು ಬಿಜೆಪಿ ಚಿಹ್ನೆಗೆ ಮತನೀಡಿ ಎಂದು ಮತದಾರರಿಗೆ ಮೋದಿ ಭಾವ ಚಿತ್ರವನ್ನು ನೀಡಿ ಪ್ರಚಾರ ನಡೆಸಿದ್ದಾರೆ. ಈ ಸಂಬಂಧ ಚುನವಾಣಾಧಿಕಾರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ಬಿಜೆಪಿಯಿಂದ ಮಾಜಿ ಮೇಯರ್ ಬಸಪ್ಪ ಚಿಕ್ಕಲದಿನ್ನಿ ಅವರ ಸೊಸೆ ಸ್ಪರ್ಧೆ ಮಾಡಿದ್ದು, ಚಿಕ್ಕಲದಿನ್ನಿ ಅವರೇ ಈ ಗುರುತಿನ ಚೀಟಿ ಕೊಟ್ಟುಕಳುಹಿಸಿದ್ದಾರೆ. ಸ್ವತ: ವಾರ್ಡ್ ಗೆ ಬಂದು ಪರಿಶೀಲಿಸಿದ್ದು, ಮತದಾರರಿಂದ ಪ್ರಧಾನಿ ಮೋದಿ ಭಾವಚಿತ್ರ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ