Kannada NewsLatest

ವಿಚಾರಣಾಧೀನ ಕೈದಿ ಸಾವು ಪ್ರಕರಣ: CBI ತನಿಖೆಗೆ ವಹಿಸುವಂತೆ ಆಪ್ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆ ತಂದಿದ್ದ ಬಸನಗೌಡ ಪಾಟೀಲ ಮೃತಪಟ್ಟಿದ್ದು ನಾನಾ ಅನುಮಾನಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆಮ್ ಆದ್ಮಿ ಉತ್ತರ ವಲಯದ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಒತ್ತಾಯಿಸಿದ್ದಾರೆ.

ಈ‌ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೆಲ್ಲದಬಾಗೇವಾಡಿಯ 45 ವರ್ಷದ ಬಸನಗೌಡ ಪಾಟೀಲ ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿಯೇ ಮೃತಪಟ್ಟಿದ್ದಾನೆ ಎನ್ನುವ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ. ನಗರ ಪೊಲೀಸ್ ಆಯುಕ್ತರು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಬದಲು ಸಿಬಿಐ ತನಿಖೆ ನಡೆಸಿ ಬಸನಗೌಡ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಗಾಂಜಾ ಪ್ರಕರಣದ ಹಿನ್ನೆಲೆಯಲ್ಲಿ ಬೆಲ್ಲದ ಬಾಗೇವಾಡಿಯಿಂದ ಬೆಳಗಾವಿಗೆ ಕರೆತಂದು ವಿಚಾರಣೆ ನಡೆಸಿದ್ದ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಅಸ್ವಸ್ಥಗೊಂಡರು. ಬಳಿಕ ಪೊಲೀಸರು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಿಸದೆ ಬಸನಗೌಡ ಪಾಟೀಲ್ ಮೃತಪಟ್ಟಿದ್ದಾನೆ. ಪೊಲೀಸರ ವಶದಲ್ಲಿದ್ದಾಗ ಬಸನಗೌಡ ಮೃತಪಟ್ಟಿರುವ ಶಂಕೆ ಇದೆ. ಇದನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಇದರ ಬದಲು ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕೆಂದು ಟೋಪಣ್ಣವರ ಒತ್ತಾಯಿಸಿದ್ದಾರೆ.

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಅಪ್ರಾಪ್ತನ ವಿರುದ್ಧ ಚಾರ್ಜ್ ಶೀಟ್ ಫೈಲ್

https://pragati.taskdun.com/latest/miner-girl-rape-and-murder-casecharge-sheet-filekalaburgialanda-police/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button