ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕಾರ್ಯಾಲಯಕ್ಕೆ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಮಂಗಲಾ ಸುರೇಶ ಅಂಗಡಿ ಭೇಟಿ ನೀಡಿ, ದಿ.ಸುರೇಶ ಅಂಗಡಿಯವರು ತಮ್ಮ ಅವಧಿಯಲ್ಲಿ ಮಾಡಿರುವ ಸಾಧನೆಗಳು, ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ಅವರಿಗೆ ಬೆಂಬಲ ನೀಡಿದಂತೆ ನನಗೂ ಅವರ ಹಾದಿಯಲ್ಲಿಯೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಿಕೊಂಡು ಹೋಗಲು ಅವಕಾಶ ಕಲ್ಪಿಸಿಕೊಡಲು ತಮ್ಮ ಬೆಂಬಲವನ್ನು ನೀಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಸಂಜಯ ಪಾಟೀಲ, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿಯವರಿಗೆ ಅಭಿನಂದನೆ ಸಲ್ಲಿಸುತ್ತಾ ಭಾರತೀಯ ಜನತಾ ಪಕ್ಷ ಕೈಗೊಂಡ ನಿರ್ಧಾರಕ್ಕೆ ನಾವೆಲ್ಲರೂ ಭದ್ದರಾಗಿ ಸುಮಾರು 5 ಲಕ್ಷ ಮತಗಳ ಅಂತರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಮಂಗಲಾ ಅಂಗಡಿಯವರನ್ನು ಆರಿಸಿತಂದು ಮತ್ತೊಮ್ಮೆ ಬಿಜೆಪಿ ಪಕ್ಷದ ವಿಜಯ ಪತಾಕೆಯನ್ನು ಹಾರಿಸಲು ಸನ್ನದ್ಧರಾಗೋಣ ಎಂದು ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ