Kannada NewsLatest

ಏಪ್ರಿಲ್ 7ರಂದು ಬೆಳಗಾವಿಗೆ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತದಾರರ ಓಲೈಕೆಗಾಗಿ ವಿವಿಧ ಕಸರತ್ತುಗಳನ್ನು ನಡೆಸಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೈ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕೆ ಅಖಾಡಕ್ಕೆ ಇಳಿದಿದ್ದಾರೆ.

ಏಪ್ರಿಲ್ 5ರಿಂದ ನಾಲ್ಕು ದಿನಗಳ ಕಾಲ ಡಿ.ಕೆ.ಶಿವಕುಮಾರ್ ರಾಯಚೂರು, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Home add -Advt

ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಏ.7ರಂದು ಕುಂದಾನಗರಿಗೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಭರ್ಜರಿ ಮತಬೇಟೆ ನಡೆಸಲಿದ್ದಾರೆ.

​ಎಲ್ಲಿದೆ ಅಚ್ಛೇದಿನ್? ಭ್ರಷ್ಟಾಚಾರವೇ ಬಿಜೆಪಿಯ ಸಾಧನೆ –  ಎಂ.ಬಿ.ಪಾಟೀಲ  

Related Articles

Back to top button