
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ.
ಬಾಲಕಾರ್ಮಿಕ (ನಿಷೇಧ ಮತ್ತು ನಿಯಮ) ಕಾಯ್ದೆ 1986 ರ ಪ್ರಕಾರ 14 ವರ್ಷದ ಒಳಗಿನ ಮಕ್ಕಳನ್ನು ಕೆಲಸಗಾರರನ್ನಾಗಿ ಬಳಸಿಕೊಳ್ಳುವುದು ಅಪರಾಧವಾಗಿರುತ್ತದೆ. ಆದ್ದರಿಂದ ಎಲ್ಲ ರಾಜಕೀಯ ಪಕ್ಷಗಳು, ಚುನಾವಣಾ ಅಭ್ಯರ್ಥಿಗಳು ಹಾಗೂ ಚುನಾವಣಾ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಪ್ರಚಾರ, ಪ್ರಚಾರಕ್ಕೆ ಸಂಬಂಧಪಟ್ಟ ಸರಕು-ಸಾಮಗ್ರಿಗಳ ಸಾಗಾಣಿಕೆ ಹಾಗೂ ಇನ್ನೀತರೆ ಯಾವುದೇ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ.
ಬಾಲಕಾರ್ಮಿಕರ ಕುರಿತು ಇರುವ ನಿಯಮಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಆಯಾ ರಾಜಕೀಯ ಪಕ್ಷಗಳ ಮುಖಂಡರ ಜವಾಬ್ದಾರಿಯಾಗಿರುತ್ತದೆ.
ಒಂದು ವೇಳೆ, ಅಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ