Kannada NewsLatest

ಕಾಂಗ್ರೆಸ್ ನಿಂದ ದೇಶದ ಬದಲಾವಣೆ ಅಸಾಧ್ಯ: ಜಗದೀಶ್ ಶೆಟ್ಟರ್ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ; ಬೈಲಹೊಂಗಲ: ಅಡ್ರೆಸ್ಸ್ ಇಲ್ಲದೆ ಅಧೋಗತಿಗೆ ಹೋಗುತ್ತಿರುವ ಕಾಂಗ್ರೆಸ್ ಪಕ್ಷದಿಂದ ದೇಶದ ಬದಲಾವಣೆ ಕಾಣಲಾಗದು. ಪ್ರಬುದ್ಧತೆಯಿಲ್ಲದ ರಾಹುಲ್ ಗಾಂಧಿ ದಿನದ 24 ಗಂಟೆ ಜನಸೇವೆ ಮಾಡುತ್ತಿರುವ ಮೋದಿಜಿಯವರಿಗೆ ಎಲ್ಲಿಯ ಹೋಲಿಕೆ.  ಕಾಂಗ್ರೆಸ್ಸಿಗರೆ ಟೀಕೆ ಬಿಟ್ಟು ಕೇಂದ್ರದ ಸಾಧನೆ ತಿಳಿದುಕೊಳ್ಳಿ ಎಂದು ಕಾಂಗ್ರೆಸ್ ನಾಯಕರನ್ನು ಮಾಜಿ ಮುಖ್ಯಮಂತ್ರಿ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್  ತರಾಟೆಗೆ ತೆಗೆದುಕೊಂಡಿದ್ದಾರೆ.

ಬೈಲಹೊಂಗಲದ ಮುರುಗೋಡ ರಸ್ತೆಯ ಪೃಥ್ವಿ ಗಾರ್ಡನ್ ನಲ್ಲಿ ಶುಕ್ರವಾರ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸನ್ನು ತೀವ್ರ ತರಾಟೆಗೆ ತೆಗೆದುಕೊಂಡು ರೈತರ ಜೀವನವನ್ನು ಹಸನಾಗಿಸಲು ಬದಲಾವಣೆ ತರಲು ಕೇಂದ್ರ ಸರ್ಕಾರ ಜಾರಿಗೆ ತಂದ ರೈತಪರ ಕೃಷಿ ಕಾಯ್ದೆಗಳನ್ನು ಕಾಂಗ್ರೆಸ್ ಕುಮ್ಮಕ್ಕು ನೀಡಿ ಕೆಲ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ ಎಂದರು.

Home add -Advt

ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಭಾರತಕ್ಕೆ ಶಾಪವಾಗಿ ಪರಿಣಮಿಸಿದೆ. ಅವರ ದುರಾಡಳಿತ ಸ್ವಾರ್ಥದಿಂದ ದೇಶ ಅಧೋಗತಿಗೆ ತಲುಪಿತ್ತು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ಬದಲಾವಣೆ ಮೂಲೆ-ಮೂಲೆಗಳಲ್ಲಿ ಕಾಣಸಿಗುತ್ತಿದೆ. ಕಾಂಗ್ರೆಸ್ ಕುಟುಂಬ ರಾಜಕಾರಣವನ್ನು ಮುಂದಿಟ್ಟುಕೊಂಡು ನೆಹರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಪ್ರಧಾನಿಗಳಾಗಿ ಈಗ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಹೊರಟಿರುವ ಕಾಂಗ್ರೆಸ್ ನೀತಿ ದುರಾದೃಷ್ಟಕರ ಎಂದರು.

ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ಮಾತನಾಡಿದರು.

Related Articles

Back to top button