Karnataka NewsLatest

*ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ: ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

Home add -Advt

ಇಲ್ಲಿನ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದ ಮನೆಯಲ್ಲಿ ತಾಯಿ ಹಾಗೂ ಮಗಳ ಶವ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ. ತಾಯಿ ಗೀತಾ (45) ಹಾಗೂ ಮಗಳು ಲಾವಣ್ಯ (17) ಮೃತರು.

ತಾಯಿ-ಮಗಳು ಇಬ್ಬರೂ ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿ ಇಂದು ಪತ್ತೆಯಗೈದೆ.

6 ತಿಂಗಳ ಹಿಂದೆ ಗೀತಾ ಅವರ ಪತಿ ಬಸವರಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಪತಿ ಅಗಲಿಕೆಯಿಂದ ತಾಯಿ ಗೀತಾ ಹಾಗೂ ಮಗಳು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೀಗ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button