Kannada NewsLatest

ಉಪಚುನಾವಣೆ; ಒಗ್ಗಟ್ಟಿನಿಂದ ಪ್ರಚಾರ ಆರಂಭಿಸಿದ ಸತೀಶ್ ಜಾರಕಿಹೊಳಿ- ಲಕ್ಷ್ಮಿ ಹೆಬ್ಬಾಳ್ಕರ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲೋಕಸಭಾ ಉಪಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಮರೆತು ಒಂದಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಬೆಳಿಗ್ಗೆ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಕೆಲ ಕಾಲ ಚರ್ಚೆ ನಡೆಸಿದರು. ಬಳಿಕ ಇಬ್ಬರೂ ಒಂದೇ ವಾಹನದಲ್ಲಿ ತೆರಳಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಎಲ್ಲ ಸಮಾಜಗಳ ಮತದಾರರನ್ನು ಸೆಳೆಯಲು ಇಬ್ಬರು ನಾಯಕರು ರಣತಂತ್ರ ರೂಪಿಸಿದ್ದು, ಹಾಗಾಗಿ ಒಂದೇ ವಾಹನದಲ್ಲಿ ತೆರಳಿ ಮತಬೇಟೆ ಆರಂಭಿಸಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಲಕ್ಷ್ಮಿ ಹೆಬ್ಬಾಳ್ಕರ್, ನಮ್ಮ ಅಭ್ಯರ್ಥಿಯಾಗಿರುವ ಸತೀಶ್ ಜಾರಕಿಹೊಳಿ ತಮ್ಮ ಕ್ಷೇತ್ರಕ್ಕೆ ಮಾತ್ರ ಸೀಮಿತರಾಗಿರದೇ ಇಡೀ ಜಿಲ್ಲೆಯಲ್ಲಿ ತಮ್ಮದೇ ಆದ ವೋಟ್ ಬ್ಯಾಂಕ್ ಇಟ್ಟುಕೊಂಡಿರುವ ನಾಯಕ. 2014ರ ನನ್ನ ವಿಧಾನಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆದಿದೆ.   ಈ ಚುನಾವಣೆಯಲ್ಲಿ ಸತೀಶ್ ಅಣ್ಣಾ ಎಲ್ಲಿ ಪ್ರಚಾರ ಮಾಡು ಎಂದು ಹೇಳುತ್ತಾರೋ ಅಲ್ಲಿ ಹೋಗಿ ಪಕ್ಷದ ಪರ ಪ್ರಚಾರ ಮಾಡುತ್ತೇನೆ ಎಂದರು.

ಲೋಕಸಭಾ ಚುನಾವಣೆ ಯಾವುದೇ ಜಾತಿ, ಪಕ್ಷದ ಮೇಲೆ ನಡೆಯುವುದಿಲ್ಲ. ಅಭ್ಯರ್ಥಿಯ ಮೇಲೆ ನಡೆಯುತ್ತದೆ. ಸತೀಶ್ ಜಾರಕಿಹೊಳಿ ಕಳೆದ 25 ವರ್ಷಗಳಿಂದ ಕ್ಷೇತ್ರದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಎಲ್ಲಾ ಸಮಾಜದ ಜೊತೆ ಉತ್ತಮ ಸಂಬಂಧಗಳನ್ನು ಹೊಂದಿದ್ದಾರೆ. ಹಾಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.

ಸತೀಶ ಜಾರಕಿಹೊಳಿ ಪರ ಅಬ್ಬರದ ಪ್ರಚಾರಕ್ಕಿಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button