Kannada NewsLatest

ಲೋಕಸಭಾ ಉಪ ಚುನಾವಣೆ: ಸ್ಟ್ರಾಂಗ್ ರೂಮ್, ಮತ ಎಣಿಕೆ ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ನಗರದ ಟಿಳಕವಾಡಿಯ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿರುವ ವಿವಿಧ ಕಟ್ಟಡಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪರಿಶೀಲಿಸಿದರು.

ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಕೊಠಡಿಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಿಗೆ ತಿಳಿಸಿದರು.

ಸ್ಟ್ರಾಂಗ್ ರೂಮ್ ನಿರ್ಮಾಣ ಹಾಗೂ ಬ್ಯಾರಿಕೇಡಿಂಗ್ ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

Home add -Advt

ಕಟ್ಟಡಗಳನ್ನು ಗುರುತಿಸಿ ಅಂತಿಮಗೊಳಿಸಿದರೆ ನಿಗದಿತ ಕಾಲಾವಧಿಯಲ್ಲಿ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ತಿಳಿಸಿದರು. ಭದ್ರತಾ ವ್ಯವಸ್ಥೆ, ಪಾರ್ಕಿಂಗ್ ಮತ್ತಿತರ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಯಿತು.

ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ಡಾ.ವಿಕ್ರಮ ಆಮಟೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಮಹಾನಗರ ಪಾಲಿಕೆಯ ಆಯುಕ್ತ ಕೆ‌ಎಚ್.ಜಗದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ತಹಶಿಲ್ದಾರ ಆರ್.ಕೆ‌.ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button