Belagavi NewsBelgaum News

*ಮಗುವನ್ನು ಕೈಯಲ್ಲಿ ಎತ್ತಿಕೊಂಡು ಚುನಾವಣಾ ಕರ್ತವ್ಯ ನಿರ್ವಹಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆದಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಮಗುವನ್ನು ಕೈಯಲ್ಲಿ ಎತ್ತಿಕೊಂಡೇ ಕರ್ತವ್ಯ ನಿರ್ವಹಿಸಿದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.

Home add -Advt

ಮಾಳಮಾರುತಿ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದು, ಉರಿಬಿಸಿಲ ಮಧ್ಯೆ ಒಂದುವರೆ ವರ್ಷದ ಮಗುವನ್ನು ಕೈಯಲ್ಲಿ ಎತ್ತಿಕೊಂಡೇ ಕರ್ತವ್ಯ ನಿರ್ವಹಿಸಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿಯ ಕರ್ತವ್ಯ ನಿಷ್ಠೆಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


Related Articles

Back to top button