Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ 17 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಒಟ್ಟು 72 ಸ್ಥಳಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಎಸ್.ಬಿರಾದಾರ್ ಹಾಗೂ ಕಲಬುರ್ಗಿಯ ನಗರ ಹಾಗೂ ಗ್ರಾಮೀಣ ಯೋಜನಾ ಜಂಟಿ ನಿರ್ದೇಶಕ ಅಪ್ಪಾಸಾಬ್ ಕಾಂಬಳೆ ಅವರಿಗೆಸೇರಿದ ಬೆಳಗಾವಿ ಮನೆ ಮೇಲೆ ದಾಳಿ ನಡೆದಿದೆ.

Home add -Advt

ಲೋಕಾಯುಕ್ತ ಎಸ್ ಪಿ ಹನುಮಂತರಾಯ ನೇತೃತ್ವದಲ್ಲಿ ಡಿಎಸ್ ಪಿ ರಘು ತಂಡ ದಾಳಿ ನಡೆಸಿದೆ. ನಗರದ ಶ್ರದ್ಧಾ ಅಪಾರ್ಟ್ ಮೆಂಟ್ ನ ಮನೆ, ಕಿತ್ತೂರು ಹಾಗೂ ಖಾನಪುರದಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಅಪ್ಪಾಸಾಬ್ ಕಾಂಬಳೆ ಅವರಿಗೆ ಸೇರಿದ ರಾಮತೀರ್ಥನಗರದಲ್ಲಿರುವ ಹಳೆ ಮನೆ, ಆಟೋ ನಗರದಲ್ಲಿರುವ ಕಾರ್ಖಾನೆ ಮೇಲೆ ದಾಳಿ ನಡೆಸಲಾಗಿದೆ.


Related Articles

Back to top button