
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ಏಪ್ರಿಲ್ 17ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಡುವೆ ತೀವ್ರ ಪೈಪೋಟಿಯಿದ್ದು, ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ.
ಈ ನಡುವೆ ಇಂದು ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ,ಎಸ್.ಆರ್ .ಪಾಟೀಲ್,ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತರಿದ್ದರು.
ನನಗೆ ಚುನಾವಣೆ ಮುಖ್ಯ, ಮೊದಲು ಚುನಾವಣೆ ಎದುರಿಸೋಣ ಎಂದ ಡಿ.ಕೆ.ಶಿವಕುಮಾರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ