ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆ.ಎಲ್.ಎಸ್. ಗೋಗಟೆ ವಾಣಿಜ್ಯ ಮಹಾವಿದ್ಯಾಲಯದ ಎಂ.ಕಾಮ್. ವಿಭಾಗ ಮತ್ತು ಸಂಶೋಧನಾ ವಿಭಾಗಗಳ ಜಂಟಿ ಸಹಯೋಗದಲ್ಲಿ “Research Methodology: A skill Building Approach” ಎನ್ನುವ ವಿಷಯದ ಬಗ್ಗೆ ಮೂರು ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ದಿನಾಂಕ 18 ಜನೇವರಿ 2021 ರಂದು ಕಾರ್ಯಾಗಾರದ ಉದ್ಘಾಟನಾ ಸಮಾರಂಭವನ್ನು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಮುಖ್ಯಸ್ಥರಾದ ಡಾ. ಎಚ್. ವಾಯ್. ಕಾಂಬಳೆ ಅವರು ನೆರವೇರಿಸಲಿದ್ದಾರೆ.
ಸಂಶೋಧನಾ ಶಾಸ್ತ್ರದ ವಿವಿಧ ವಿಷಯಗಳ ಮೇಲೆ ನಗರದ ವಿವಿಧ ಕಾಲೇಜುಗಳು ಮತ್ತು ಸ್ನಾತಕೋತ್ತರ ವಿಭಾಗಗಳ ಪ್ರಾಧ್ಯಾಪಕರುಗಳು, ಸಂಶೋಧನಾ ಮುಖ್ಯಸ್ಥರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ. 18 ಜನೇವರಿ 2021 ರಿಂದ 20 ಜನೇವರಿ 2021 ರವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯುವ ಕಾರ್ಯಾಗಾರದಲ್ಲಿ ಎಂ. ಕಾಮ್. ಮತ್ತು ಎಂ.ಬಿ.ಎ. ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ ಎಂ. ಕಾಮ್. ವಿಭಾಗದ ನಿರ್ದೆಶಕರು ಕೋರಿರುತ್ತಾರೆ.
ಆಸಕ್ತ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಮಹಾವಿದ್ಯಾಲಯದ ವೆಬ್ ಸೈಟ್ http://gccbgm.org ನಲ್ಲಿ ಲಿಂಕ್ ಪಡೆದುಕೊಂಡು ತಮ್ಮ ಹೆಸರನ್ನು ನೊಂದಾಯಿಸಬಹುದಾಗಿದೆ ಮತ್ತು http://zoom meetings ಮೂಲಕ ಭಾಗವಹಿಸಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ