Latest

ಪಡಿತರದಾರರಿಗೆ ಅಂತರರಾಜ್ಯ/ಅಂತರ ಜಿಲ್ಲೆ ಪೋರ್ಟೆಬಿಲಿಟಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್ 19 ಎರಡನೇ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನುಸಾರ ಸಾರ್ವಜನಿಕ ವಿತರಣಾ ಪದ್ಧತಿಯಡಿ 2021ರ ಜುಲೈ ಮಾಹೆಯ ಧಾನ್ಯಗಳನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಂತ್ಯೊದಯ ಪಡಿತರ ಚೀಟಿ(NFSA)ದಾರರಿಗೆ ಅಕ್ಕಿ 35 ಕೆಜಿ, (PMGKAY) ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.

ಬಿಪಿಎಲ್(ಆದ್ಯತಾ) ಪಡಿತರ ಚೀಟಿ(NFSA)ದಾರರಿಗೆ ಪ್ರತಿ ಸದಸ್ಯರಿಗೆ 5 ಕೆಜಿ, (PMGKAY) ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ, (NFSA) ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋದಿ. ಎಪಿಎಲ್ ಪಡಿತರ ಚೀಟಿ ಆದ್ಯೇತರ ಒಪ್ಪಿಗೆ ನೀಡಿದ ಪಡಿತರ ಚೀಟಿಗೆ ಏಕ ಸದಸ್ಯನಿಗೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿ ಪ್ರತಿ ಕೆಜಿ ಗೆ 15 ರೂ. ಯಂತೆ ನೀಡಲಾಗುವುದು.

ಪ್ರತಿ ಮಂಗಳವಾರ ರಜೆಯ ದಿನವನ್ನು ಹಿಂದೆ ಪಡೆದು, ರಾಷ್ಟ್ರೀಯ ರಜೆಗಳನ್ನು ಹೊರತುಪಡಿಸಿ ಪಡಿತರ ವಿತರಣೆಯನ್ನು ತಿಂಗಳ ಪೂರ್ತಿ ಮಾಡುವಂತೆ ನ್ಯಾಯಬೆಲೆ ಅಂಗಡಿಕಾರರಿಗೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

ಪಡಿತರ ಚೀಟಿದಾರರಿಗೆ ಯಾವುದೇ ರೀತಿಯಾಗಿ ನ್ಯಾಯಬೆಲೆ ಅಂಗಡಿಕಾರರಿಂದ ತೊಂದರೆ ಉಂಟಾದಲ್ಲಿ, 1967 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು.

ಪ್ರತಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಕಾರರು ಸರ್ಕಾರ ನೀಡುತ್ತಿರುವ ಪಡಿತರ ವಸ್ತುಗಳನ್ನು ಹೊರತುಪಡಿಸಿ ಬೇರೆ ವಸ್ತುಗಳನ್ನು ವಿತರಣೆ ಮಾಡಬಾರದು ಹಾಗೂ ಯಾವುದೇ ಕಾರಣಕ್ಕೂ ಪಡಿತರ ಚೀಟಿದಾರರಿಂದ ಇಂಟರ್ನೆಟ್ ಚಾರ್ಜರ್ಸ್ ವಸೂಲಿ ಮಾಡಿದ ದೂರು ಬಂದಲ್ಲಿ ಆಯಾ ತಾಲೂಕಿನ ಕಾರ್ಯನಿರ್ವಾಹಕ ಸಿಬ್ಬಂದಿಗಳನ್ನೆ ನೇರ ಹೊಣೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಅಂತರರಾಜ್ಯ/ಅಂತರ ಜಿಲ್ಲೆ ಪೋರ್ಟೆಬಿಲಿಟಿ ಜಾರಿ ಇರುವುದರಿಂದ ಯಾವುದೇ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ವಸ್ತುಗಳನ್ನು ಪಡೆಯುವುದು ಕಡ್ಡಾಯವಾಗಿದೆ.

ನಾನೂ ಸಿಎಂ ಸ್ಥಾನದ ಆಕಾಂಕ್ಷಿ ಎಂದ ಉಮೇಶ್ ಕತ್ತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button