ರೈತರ ವಿರೋಧದ ನಡುವೆ ರಸ್ತೆ ಕಾಮಗಾರಿಗೆ ಮುಂದಾದ ಅಧಿಕಾರಿಗಳು; ಬೆಳೆ ಹಿಡಿದು ಪ್ರತಿಭಟನೆ ನಡೆಸಿದ ಅನ್ನದಾತ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರೈತರ ಪ್ರತಿಭಟನೆ, ವಿರೋಧಗಳ ನಡುವೆಯೇ ಜಿಲ್ಲಾಡಳಿತ ಬೆಳಗಾವಿ ಜಿಲ್ಲೆಯ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಿದೆ.
ಒಂದೆಡೆ ರೈತರು ಜೀವ ಬಿಟ್ಟೆವು ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಬೆಳೆದ ಬೆಳೆಗಳನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದು, ಇನ್ನೊಂದೆಡೆ ರೈತರ ಧರಣಿಗೆ ಕ್ಯಾರೆ ಎನ್ನದ ಅಧಿಕಾರಿಗಳು ಜೆಸಿಬಿಗಳನ್ನು ತಂದು ಕಾಮಗಾರಿ ಆರಂಭಿಸಿದ್ದಾರೆ. ವರ್ಕ್ ಆರ್ಡರ್ ಹಿಡಿದು 9.5ಕಿ.ಮೀವರೆಗೆ ಮಾರ್ಕಿಂಗ್ ಮಾಡಲಾಗಿದೆ.
ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧಿಸಿ ನಿನ್ನೆ ಪ್ರತಿಭಟನೆ ನಡೆಸಿದ್ದ ರೈತರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ತಾತ್ಕಾಲಿಕವಾಗಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಅಲ್ಲದೇ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ರೈತರೊಂದಿಗೆ ಸಂಧಾನ ಸಭೆ ನಡೆಸಿ ಮನವೊಲಿಕೆ ಯತ್ನ ನಡೆಸಿದ್ದರು.
ಆದರೂ ಬಗ್ಗದ ರೈತರು ಯಾವುದೇ ಕಾರಣಕ್ಕೂ ಭೂಸ್ವಾದೀನಕ್ಕೆ ಅವಕಾಶ ನೀಡಲ್ಲ. ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಘೋಷಿಸಿದ್ದರು. ರೈತರ ಎಚ್ಚರಿಕೆ ನಡುವೆಯೂ ಒಂದೆಡೆ ಇಂದು ರಸ್ತೆ ಕಾಮಗಾರಿ ಆರಂಭವಾಗಿದ್ದರೆ, ಇನ್ನೊಂದೆಡೆ ರೈತರು ಕೂಡ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹಳಿತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ