Belagavi NewsBelgaum News
*ಬೆಳಗಾವಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕುಂದಾನಗರಿಗೆ ಆಗಮಿಸಿದ್ದಾರೆ.
ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನದ ಉದ್ಘಾಟನೆಗೆ ಬೆಳಗಾವಿಗೆ ಆಗಮಿಸಿದ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕಿ ಸಂಸದೆ ಪ್ರಿಯಾಂಕಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಇದೇ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವರಿಷ್ಠರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ