Belagavi NewsBelgaum NewsKarnataka News
*ಹಾಡಹಗಲೇ ಬೆಳಗಾವಿಯಲ್ಲಿ ಮತ್ತೊಂದು ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಬೆಳಗಾವಿಯಲ್ಲಿ ಬರ್ಬರ ಹತ್ಯೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದುದೆ.
52 ವರ್ಷದ ಮೋಹನ್ ತಳವಾರ ಕೊಲೆಯಾದ ದುರ್ದೈವಿ. ಬೆಳಗಾವಿಯ ಕರ್ಲೆ ಗ್ರಾಮದ ನಿವಾಸಿ. ಗ್ರಾಮ ಪಂಚಾಯಿತಿಗೆ ಹೋಗಿ ಬೈಕ್ ನಲ್ಲಿ ಬರುತ್ತಿದ್ದ ಮೋಹನ್ ನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ