
ಪ್ರಗತಿವಾಹಿನಿ ಸುದ್ದಿ: ದೇವಸ್ಥಾನಕ್ಕೆಂದು ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ನಡೆದಿದೆ.
ಅಥಣಿ ಪಟ್ಟಣದ ನಿವಾಸಿ ಗುರುರಾಜ್ ಈರಪ್ಪ ಯಾದವಾಡ ಎಂಬುವವರು (72) ಮೃತ ದುರ್ದೈವಿ. ಎಂದಿನಂತೆ ಸೈಕಲ್ ನಲ್ಲಿ ಗುರುರಾಜ್, ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದು ಬರುತ್ತಿದ್ದರು. ಅದರಂತೆ ಇಂದು ಬೆಳಿಗ್ಗೆ ಕೂಡ ಸೈಕಲ್ ಏರಿ ದವರ ದರ್ಶನಕ್ಕೆ ತೆರಳಿದ್ದಾರೆ.
ಈ ವೇಳೆ ನಿಯಂತ್ರಣ ತಪ್ಪಿ ಮೊಸಬಾ ಹಳ್ಳಕ್ಕೆ ಬಿದ್ದಿದ್ದಾರೆ. ನೀರಿನ ರಭಸಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಗುರುರಾಜ್ ಸಾವನ್ನಪ್ಪಿದ್ದಾರೆ.
ಅಥಣಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ