
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇದೀಗ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರಯಾಗ್ ರಾಜ್ ಯಾತ್ರೆಗೆ ತೆರಳಿದ್ದ ಬೆಳಗಾವಿಯ ದೇಶಪಾಅಂಡೆ ನಗರದ ನಿವಾಸಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರವಿ ಜಟಾರ (61) ಮೃತರು. ಯಾತ್ರೆ ಮುಗಿಸಿ ರೈಲಿನಲ್ಲಿ ಬೆಳಗಾವಿಗೆ ವಾಪಸ್ ಆಗುತ್ತಿದ್ದಾಗ ಪುಣೆ ಬಳಿ ರವಿ ಅವರಿಗೆ ಹೃದಯಾಘಾತವಾಗಿದ್ದು, ರೈಲಿನಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ