Belagavi NewsBelgaum News

*ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಹುಡುಗರಿಂದ ಗೂಂಡಾಗಿರಿ: ಮರಾಠಿ ಬರಲ್ಲ ಎಂದಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮರಾಠಿ ಹುಡುಗರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಗೂಂಡಾಗಿರಿ ಮೆರೆದಿರುವ ಘಟನೆ ನಡೆದಿದೆ. ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಕಂಡಕ್ಟರ್ ಗೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ.

ಮಹದೇವ್ ಹಲ್ಲೆಗೊಳಗಾಗಿರುವ ಬಸ್ ಕಂಡಕ್ಟರ್. ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಬಸ್ ನಲ್ಲಿದ್ದ ಯುವತಿಯೊಬ್ಬರು ಮರಾಠಿಯಲ್ಲಿ ಟಿಕೆಟ್ ಕೇಳಿದ್ದರು. ಕಂಡಕ್ಟರ್ ತನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಅಷ್ಟಕ್ಕೇ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು, ಕಂಡಕ್ಟರ್ ನನ್ನು ಹಿಡಿದು ಮರಾಠಿ ಮಾತನಾಡುವಂತೆ ಒತ್ತಾಯಿಸಿದ್ದಾರೆ. ಸಾಲದ್ದಕ್ಕೆ ಬಸ್ ನಿಲ್ಲಿಸುವಂತೆ ಹೇಳಿ ಬಸ್ ನಿಲ್ಲಿಸಿ, ಕಂಡಕ್ಟರ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

Home add -Advt

ಗಂಭೀರವಾಗಿ ಹಲ್ಲೆಗೊಳಗಾಗಿರುವ ಕಂಡಕ್ಟರ್ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related Articles

Back to top button