
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕೊರೊನಾ ಮರೆತು ಜನರು ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆಯಲ್ಲಿ ತೊಡಗಿದ್ದಾರೆ. ಇಂದಿನಿಂದ ಒಂದು ವಾರಕಾಲ ಲಾಕ್ ಡೌನ್ ವಿಸ್ತರಣೆಯಾಗುತ್ತಿರುವ ಬೆನ್ನಲ್ಲೇ ಅಗತ್ಯ ವಸ್ತುಗಳ ಖರೀದಿಗಾಗಿ ಮುಗಿಬಿದ್ದಿದ್ದಾರೆ.
ರವಿವಾರಪೇಟೆ, ಗಣಪತಿಗಲ್ಲಿಯಲ್ಲಿ ಜನಜಾತ್ರೆಯೇ ನೆರೆದಿದ್ದು, ದೈಹಿಕ ಅಂತರ ಮರೆತು ಗ್ರಾಹಕರು ವ್ಯಾಪಾರದಲ್ಲಿ ಬ್ಯುಸಿಯಾಗಿದ್ದಾರೆ. ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಪದೇ ಪದೇ ಎಚ್ಚರಿಕೆ ನೀಡಿದ್ದರೂ ಕೂಡ ಜನರು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಮಾರುಕಟ್ಟೆಗಳಲ್ಲಿ ಜನರು ಮುಗಿಬಿದ್ದು ತರಕಾರಿ, ದಿನಸಿ, ಹಣ್ಣುಗಳ ಖರೀದಿಯಲ್ಲಿ ತೊಡಗಿದ್ದಾರೆ.
ಮಾರುಕಟ್ಟೆಯಲ್ಲಿನ ಜನಜಂಗುಳಿ ನೋಡಿದರೆ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುವ ಭೀತಿ ಎದುರಾಗಿದೆ.
ಕೆಎಲ್‌ಇ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವುದು ಹೇಗೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ