Latest

ಉಪಚುನಾವಣೆ ಸ್ಪರ್ಧೆಗೆ ಜೆಡಿಎಸ್ ಹಿಂದೇಟು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಲು ಹಿಂದೇಟು ಹಾಕಿದೆ. ಈ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ಉಪಚುನಾವಣೆ ವಿಧಾನಗಳನ್ನು ಗಮನಿಸಿದರೆ ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕುವುದು ವ್ಯರ್ಥ ಎನಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

Home add -Advt

ಉಪಚುನಾವಣೆಗಳಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವ ಬದಲು ಮುಂದಿನ ಚುನಾವಣೆಗೆ ಪಕ್ಷ ಸಂಘಟನೆ ಮಾಡುವುದು ಉತ್ತಮ. ಆದರೆ ಮಸ್ಕಿ, ಬಸವಕಲ್ಯಾಣ ಕ್ಷೇತ್ರದಲ್ಲಿನ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

Related Articles

Back to top button