Kannada NewsLatest

ಬೆಳಗಾವಿ; ಮದುವೆ ಮೆರವಣಿಗೆ ವೇಳೆ ಎಂಇಎಸ್ ದಾಂಧಲೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಮೆರೆದಿದೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರ ಮೇಲೆ ಹಲ್ಲೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ಧಾಮನೆ ಗ್ರಾಮದಲ್ಲಿ ನಿನ್ನೆ ರಾತ್ರಿ ಮದುವೆ ಮೆರವಣಿಗೆ ನಡೆಯುತ್ತಿತ್ತು. ಬ್ಯಾಂಡ್ ಹಾಕಿ ವಧು-ವರರನ್ನು ಮೆರವಣಿಗೆ ಮಾಡಲಾಗುತ್ತಿತ್ತು. ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಿಡಿದು ಕರುನಾಡೇ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆ ಮೇಲೆ ದಾಳಿ ನಡೆಸಿದ್ದಾರೆ.

ವಧು-ವರರು ಸೇರಿದಂತೆ ಹಲವರ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದು, ಕನ್ನಡ ಹಾಡು ಹಾಕಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆರವಣಿಗೆಯಲ್ಲಿ ಐವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

Home add -Advt

ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದು, ದೂರು ನೀಡಿದರೂ ಎಂಇಎಸ್ ಪುಂಡರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ತಾಯಿಯ ಮರಣ; ನೊಂದ ಮಗ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button