ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಮುಂದಾದ ಮಾಜಿ ಮೇಯರ್ ಸೇರಿದಂತೆ 10ಕ್ಕೂ ಹೆಚ್ಚು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯಲ್ಲಿ ಒಂದೆಡೆ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜ ತೆರವಿಗೆ ಪ್ರತಿಭಟನೆ ನಡೆಸುತ್ತಿದ್ದರೆ ಇನೊಂದೆಡೆ ಮಾಜಿ ಮೇಯರ್ ಸರೀತಾ ಪಾಟೀಲ್ ನೇತೃತ್ವದಲ್ಲಿ ಎಂಇಎಸ್ ಮಹಿಳಾ ಕಾರ್ಯಕರ್ತರು ಪೊಲೀಸರ ಕಣ್ತಪ್ಪಿಸಿ ಪಾಲಿಕೆಯ ಮುಂದೆ ಭಗವಾ ಧ್ವಜ ಹಾರಿಸಲು ಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಎಂಇಎಸ್ ಮಹಿಳಾ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಅಂತಿಮವಾಗಿ ಪೊಲೀಸರು ಮಾಜಿ ಮೇಯರ್ ಸರೀತಾ ಸೇರಿದಂತೆ 10 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆಯಿಂದ ಮತ್ತೆ ಪುಂಡಾಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ