![](https://pragativahini.com/wp-content/uploads/2020/10/r.ashok_.jpg)
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎಂಇಎಸ್ ವಿರುದ್ಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಯಾವುದೇ ಕಾರಣಕ್ಕೂ ಬಂದ್ ಮಾಡಬೇಡಿ ಎಂದು ಕಂದಾಯ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಯಾವುದೇ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡುವುದು ಸರಿಯಲ್ಲ. ಈಗಾಗಲೇ ಕೋವಿಡ್ ನಿಂದಾಗಿ ಜನರು ತತ್ತರಿಸಿದ್ದಾರೆ. ಕೊರೊನಾ ಸಮಯದಲ್ಲಿ ಜನರಿಗೆ ಬಂದ್ ಬಿಸಿ ತಟ್ಟಿದೆ. ಈಗಷ್ಟೇ ಒಂದೊಂದೇ ಕ್ಷೇತ್ರಗಳು ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಮತ್ತೆ ಬಂದ್ ಮೂಲಕ ಜನರಿಗೆ ತೊಂದರೆ ಕೊಡಬಾರದು ಎಂದು ಹೇಳಿದ್ದಾರೆ.
ಎಂಇಎಸ್ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸಿದ ಆರ್.ಅಶೋಕ್, ಎಂಇಎಸ್ ಕೇವಲ ಒಂದು ಸಂಘಟನೆಯಲ್ಲ, ಅದೊಂದು ರಾಜಕೀಯ ಪಕ್ಷ. ಹೀಗಾಗಿ ಏಕಾಏಕಿ ನಿಷೇಧಿಸಲು ಸಾಧ್ಯವಿಲ್ಲ. ಈ ಬಗ್ಗೆ ಕಾನೂನು ರೀತಿಯಲ್ಲಿಯೇ ಕ್ರಮ ಕೈಗೊಳ್ಳಬೇಕು ಎಂದರು.
ಸಿಎಂ ಬೊಮ್ಮಾಯಿ ಪ್ರತಿಕೃತಿ ದಹಸಿ ಎಂಇಎಸ್ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ