
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಮಿಮಿಕ್ರಿ ರಾಜ್‌ಗೋಪಾಲ್(69) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್‌ಗೋಪಾಲ್ ಬೆಂಗಳೂರಿನ ಕೆಂಗೇರಿ ಬಳಿಯ ನಿವಾಸದಲ್ಲಿ ಕೊನೆ ಉಸಿರೆಳೆದಿದ್ದಾರೆ.
ಕನ್ನಡ, ತಮಿಳು ಸೇರಿದಂತೆ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ರಾಜ್ ಗೋಪಾಲ್ ಅಭಿನಯಿಸಿದ್ದರು. ಕಿಡ್ನಿ ಸಮಸ್ಯೆ ಮತ್ತು ಅಸ್ತಮಾದಿಂದ ಬಳಲುತ್ತಿದ್ದ ರಾಜ್‍ಗೋಪಾಲ್, ಇಂದು ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ಒಂದೆಡೆ ರಾಜ್ಯ ಕೊರೊನಾ ವೈರಸ್ ನಿಂದ ತತ್ತರಿಸಿ ಹೋಗುತ್ತಿದ್ದರೆ ಇನ್ನೊಂದೆಡೆ ಕನ್ನಡ ಚಿತ್ರರಂಗದ ಸಾಲು ಸಾಲು ನಟರು ಸಾವನ್ನಪ್ಪುತ್ತಿರುವುದು ನಿಜಕ್ಕೂ ದು:ಖದ ಸಂಗತಿ.