Kannada NewsLatest

ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿನ ಶಿವಾಲಯದ ಹತ್ತಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃಧ್ದಿ ನಿಧಿಯಡಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ರಾಮತೀರ್ಥ ನಗರದ ರಹವಾಸಿಗಳ ಹಲವು ವರ್ಷಗಳ ಬೇಡಿಕೆಯಾದ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಯನ್ನು ಇಂದು ಕೈಗೆತ್ತಿಕೊಳ್ಳಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ರೂ. 20.00 ಲಕ್ಷ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃಧ್ದಿ ನಿದಿಯಡಿಯಲ್ಲಿನ ರೂ. 05.00 ಲಕ್ಷಗಳ ಅನುದಾನದಲ್ಲಿ ಒಟ್ಟು. ರೂ. 25.00 ಲಕ್ಷಗಳಲ್ಲಿ ಶಿವಾಲಯದ ಹತ್ತಿರ ಇಂದು ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸ್ಥಳೀಯ ಮುಖಂಡರುಗಳೊಂದಿಗೆ ಭೂಮಿ ಪೂಜೆಯನ್ನು ಸಲ್ಲಿಸಲಾಗಿದೆ ಎಂದರು. ಕಾಮಗಾರಿಯಲ್ಲಿ ಗುಣಮಟ್ಟತೆಯನು ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲ ಮಾಡಿಕೊಡಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿದ್ಯಾವತಿ ಭಜಂತ್ರಿ, ನಿರ್ಮಿತಿ ಕೇಂದ್ರದ ಸಹಾಯಕ ಅಭಿಯಂತರ ನಾಗರಾಜ ಪಾಟೀಲ, ಸ್ಥಳೀಯ ಮುಖಂಡರುಗಳಾದ ಎಸ್.ಎಸ್. ಕಿವಡಸನ್ನವರ, ನಿರ್ವಾಣಿ, ಈರಯ್ಯ ಖೋತ, ವಿಲಾಸ ಕೆರೂರ, ರಾಮತೀರ್ಥ ನಗರದ ಇತರ ಮುಖಂಡರುಗಳು ಹಾಗೂ ರಾಮತೀರ್ಥ ನಗರದ ಶಿವಾಲಯದ ಸದ್ಭಕ್ತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button