ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವೈದ್ಯರು ಕಣ್ಣಿಗೆ ಕಾಣುವ ದೇವರು ಎಂದು ಹೇಳ್ತಾರೆ. ಆದರೆ ಬಿಮ್ಸ್ ನಲ್ಲಿ ಅವ್ಯವಸ್ಥೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಸೋಂಕಿತರ ನಡುವೆಯೇ ಹೆಣಗಳನ್ನೂ ಇರಿಸಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಮ್ಸ್ ಆಸ್ಪತ್ರೆ ಅವಸ್ಥೆ ಬಗ್ಗೆ ಗಮನಕ್ಕೆ ಬಂದಿದೆ. ಅಲ್ಲಿ ಮೂರು ಗುಂಪುಗಳಿವೆ ಅವರ ಹೆಸರು ಇವರು, ಇವರ ಹೆಸರು ಅವರು ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಕೇವಲ 370 ಬೆಡ್ ಗಳಿವೆ. ಇನ್ನು 500 ಆಕ್ಸಿಜನ್ ಬೆಡ್ ಮಾಡಬೇಕಿದೆ. ಜನ ಕೇಳಿದರೆ ಬೆಡ್ ಇಲ್ಲ ಎಂದು ಮನೆಗೆ ಕಳುಹಿಸುತ್ತಿದ್ದಾರೆ. ಈ ಅವ್ಯವಸ್ಥೆ ಸರಿ ಹೋಗುವುದಾದರೂ ಯಾವಾಗ ಎಂದು ಪ್ರಶ್ನಿಸಿದ್ದಾರೆ.
ವೈದ್ಯರ ನಡೆ ಹಳ್ಳಿ ಕಡೆ ಎಂದು ಸರ್ಕಾರ ಅಭಿಯಾನ ಆರಂಭಿಸಿದೆ. ಆದರೆ ನನ್ನ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರೇ ಇಲ್ಲ. ಜಿಲ್ಲೆಯಲ್ಲಿನ ಈ ಅವ್ಯವಸ್ಥೆ ಸರಿಪಡಿಸುವಂತೆ ಸಿಎಂ ಗಮನಕ್ಕೆ ತಂದಿದ್ದೇನೆ. ಇನ್ನು ಆಶಾಕಾರ್ಯಕರ್ತೆಯರಿಗೆ 3 ತಿಂಗಳಿಂದ ಸಂಬಳ ನೀಡಿಲ್ಲ ಎಂಬುದನ್ನೂ ಗಮನಕ್ಕೆ ತಂದಿದ್ದೇನೆ. ಎರಡು ಮೂರು ದಿನಗಳಲ್ಲಿ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಎಎಸ್ ಐ ಕೊರೊನಾಗೆ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ