Kannada NewsLatest

ಶಾಸಕರ ಹುಟ್ಟುಹಬ್ಬ; ಹೂಮಳೆಗರೆದು ಸಂಭ್ರಮಿಸಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡಗೌಡರ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಶಾಸಕರನ್ನು ಹಾಗೂ ಅವರ ಪತ್ನಿಯನ್ನು ರಾಜ-ರಾಣಿಯಂತೆ ಕೂರಿಸಿ ಅವರ ಮೇಲೆ ಹೂಮಳೆಗರೆದ ಘಟನೆ ವಿವಾದಕ್ಕೆ ಕಾರಣವಾಗಿದೆ.

ಶಾಸಕ ಮಹಾಂತೇಶ್ ದೊಡ್ಡಗೌಡರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿದ್ದ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿಎಸ್ ಐ ಶೀಗಿಹಳ್ಳಿ, ಎಸ್ ಐ ವಿಶ್ವನಾಥ್ ಮಲ್ಲಣ್ಣವರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಶಾಸಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶಾಸಕರು ಹಾಗೂ ಅವರ ಪತ್ನಿಯನ್ನು ಕೂರಿಸಿ ಇಬ್ಬರ ಮೇಲೆ ಹೂವಿನ ಮಳೆಗರೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

Home add -Advt

ಶಾಸಕರ ಹಾಗೂ ಪೊಲೀಸ್ ಅಧಿಕಾರಿಗಳ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಶಾಸಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖೆ ನಿಯಮದ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಘಟನೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ವಿದ್ಯುತ್ ಬಿಲ್ ನಲ್ಲಿ ಅಕ್ರಮ : ಮೂವರ ಅಮಾನತು

Related Articles

Back to top button