Kannada NewsLatest

ಹೂಮಳೆಗರೆದ ಪೊಲೀಸರಿಗೆ ಶೋಕಾಸ್ ನೋಟೀಸ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಿತ್ತೂರು ಶಾಸಕರ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಅಧಿಕಾರಿಗಳು ಶಾಸಕರ ಮೇಲೆ ಹೂವಿನ ಮಳೆಗರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶೋಕಾಸ್ ನೋಟೀಸ್ ಜಾರಿಗೊಳಿಸಲಾಗಿದೆ.

ಈ ಕುರಿತು ಪ್ರಗತಿವಾಹಿನಿಗೆ  ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

Related Articles

ಶಾಸಕ ಮಹಾಂತೇಶ್ ದೊಡ್ಡಗೌಡರ್ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಅಧಿಕಾರಿಗಳು ಹೂವಿನಮಳೆಗರೆದಿರುವ ಬಗ್ಗೆ ಸಂಬಂಧಿಸಿದ ಪೊಲೀಸರಿಗೆ ಕಾರಣ ಕೇಳಿ ನೋಟೀಸ್ ಜಾರಿಗೊಳಿಸಲಾಗಿದೆ ಎಂದರು.

ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡಗೌಡರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿದ್ದ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿಎಸ್ ಐ ಶೀಗಿಹಳ್ಳಿ, ಎಸ್ ಐ ವಿಶ್ವನಾಥ್ ಮಲ್ಲಣ್ಣವರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಶಾಸಕರು ಹಾಗೂ ಅವರ ಪತ್ನಿಯನ್ನು ರಾಜ-ರಾಣಿಯಂತೆ ಕೂರಿಸಿ ಇಬ್ಬರ ಮೇಲೆ ಹೂವಿನ ಮಳೆಗರೆದಿದ್ದರು. ಈ ಕುರಿತ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

Home add -Advt

ಶಾಸಕರ ಹುಟ್ಟುಹಬ್ಬ; ಹೂಮಳೆಗರೆದು ಸಂಭ್ರಮಿಸಿದ ಪೊಲೀಸರು

Related Articles

Back to top button