Kannada NewsLatest

‘ಗುರುವಂದನೆ’ಗೆ ಶಾಸಕ ಶ್ರೀಮಂತ್ ಪಾಟೀಲ್ ಬೆಂಬಲ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಗರದಲ್ಲಿ ಮೇ 15 ರಂದು ನಡೆಯಲಿರುವ ಸಕಲ ಮರಾಠ ಸಮಾಜದ ಗುರುವಂದನಾ ಸಮಾರಂಭ ಹಾಗೂ ಮೆರವಣಿಗೆಯಲ್ಲಿ ಮಾಜಿ ಸಚಿವ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಬೆಂಬಲ ನೀಡಿದ್ದಾರೆ.

ರಾಜ್ಯಾದ್ಯಂತ ಚದುರಿದ ಮರಾಠ ಸಮುದಾಯ ಇನ್ನೂ ಹೆಚ್ಚಿನ ಪ್ರದೇಶಗಳಲ್ಲಿ ಹಿಂದುಳಿದಿದೆ. ಶಿಕ್ಷಣ ಮತ್ತು ಸಾಮಾಜಿಕ-ರಾಜಕೀಯ ಕ್ಷೇತ್ರದಲ್ಲಿ ಮರಾಠ ಸಮುದಾಯಕ್ಕೆ ಸರಿಯಾದ ಸ್ಥಾನ ಸಿಗುತ್ತಿಲ್ಲ. ಮರಾಠ ಸಮುದಾಯಕ್ಕೆ ಇಲ್ಲಿಯವರೆಗೂ ಪ್ರತಿಯೊಂದು ಕ್ಷೇತ್ರದಲ್ಲೂ ಅನ್ಯಾಯವಾಗುತ್ತಿದೆ. ಈ ಅನ್ಯಾಯವನ್ನು ಬಯಲಿಗೆಳೆದು ಭವಿಷ್ಯದಲ್ಲಿ ಆಗುವ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಗುರುವಂದನಾ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಚದುರಿದ ಮರಾಠ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಹೇಗೆ? ಇಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು. ಆದ್ದರಿಂದ ಈ ದಿನ ನಡೆಯುವ ಗುರುವಂದನೆ ಸಮಾರಂಭ ಹಾಗೂ ಶೋಭಾ ಯಾತ್ರೆಯಲ್ಲಿ ಮರಾಠಾ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಶಾಸಕ ಶ್ರೀಮಂತ ಪಾಟೀಲ್ ಕರೆ ನೀಡಿದ್ದಾರೆ.
ಭಾರಿ ಚರ್ಚೆಗೆ ಕಾರಣವಾಯ್ತು ಸಚಿವ ಅಶ್ವತ್ಥನಾರಾಯಣ-ಎಂ.ಬಿ.ಪಾಟೀಲ್ ಭೇಟಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button