Belagavi NewsBelgaum News

*ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಕಂದಮ್ಮನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೊಂದು ಘಟನೆ ನಡೆದಿದೆ. 17 ತಿಂಗಳ ಮಗುವಿನ ಜೊತೆ ತಾಯಿಯೊಬ್ಬರು ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ಈ ಘಟನೆ ನಡೆದಿದೆ. ಗಾಯತ್ರಿ ವಾಗಮೋರೆ (26) 17 ತಿಂಗಳ ಕಂದಮ್ಮ ಕುಶಾಲ್ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related Articles

ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ತಾಯಿ-ಮಗುವಿನ ಮೃತದೇಹಗಳನ್ನು ಬಾವಿಯಿಂದ ಹೊರತೆಗೆದಿದ್ದಾರೆ.

ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button