Kannada NewsLatest

ಅರ್ಚಕರಿಗೆ ಆಹಾರ ಕಿಟ್ ವಿತರಿಸಿದ ಅಣ್ಣಾ ಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ; ಮಂದಿರಗಳಲ್ಲಿ ನಿತ್ಯ ಪೂಜೆ ಮಾಡುವ ಅರ್ಚಕರು ಸೆನಿಟೈಸರ್ ಮತ್ತು ಮಾಸ್ಕ್ ಧರಿಸುವ ಮುಖಾಂತರ ತಮ್ಮ ಮತ್ತು ತಮ್ಮ ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕೆಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಶುಕ್ರವಾರ ಪಟ್ಟಣದ ಲೊಕೋಪಯೋಗಿ ಇಲಾಖೆ ಸಭಾಭವನದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಅರ್ಚಕರಿಗೆ ಕಿಟ್ ವಿತರಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆ ಮಾಡುತ್ತಿರುವ ಈ ಕಿಟ್ ವಿತರಣೆ ಕಾರ್ಯ ಚಿಕ್ಕದಾಗಿರಬಹುದು. ಆದರೆ ಇದು ಅರ್ಚಕರ ಬದುಕಿಗೆ ಸಹಕಾರಿಯಾಗಲಿದೆ ಎಂದರು. ಅರ್ಚಕರು ಮದುವೆ ಸಮಾರಂಭಗಳಿಗೆ ಹೋದಾಗಲೂ ಸಹ ಜಾಗ್ರತಿ ವಹಿಸಬೇಕು. ದೇವಸ್ಥಾನಗಳ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಮಾಸ್ಕ್ಗಳನ್ನು ಯಾವುದೇ ಕಾರಣಕ್ಕೂ ತೆಗೆಯಬಾರದು. ಇದು ಸಾಂಕ್ರಾಮಿಕ ರೋಗ. ಒಬ್ಬರ ಬಾಯಿಂದ ಮತ್ತೊಬ್ಬರಿಗೆ ಹರಡುವ ರೋಗ ಇದಾಗಿದೆ. ಆದ್ದರಿಂದ ಅರ್ಚಕರು ಆದಷ್ಟು ಜಾಗೃತಿ ವಹಿಸಿ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕೆಂದರು.
ಮಂದಿರಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರಿಗೆ ಸರಕಾರದಿಂದ ದೊರೆಯುವ ಪ್ರತಿಯೊಂದು ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುತ್ತಿದ್ದು, ಪ್ರತಿಯೊಬ್ಬ ಅರ್ಚಕರು ತಮ್ಮ ದಾಖಲಾತಿಗಳನ್ನು ಕೊಡಬೇಕೆಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ ಪ್ರವೀಣ ಜೈನ್  ಧಾರ್ಮಿಕ ದತ್ತಿ ಇಲಾಖೆ ಜಿಲ್ಲಾ ಸದಸ್ಯ ವಿಠ್ಠಲ ಮಾಳಿ ಉಪಸ್ಥಿತರಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ.ಮೇಕನಮರಡಿ ಸ್ವಾಗತಿಸಿ, ನಿರೂಪಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button