ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭಾಷಾ ಸಾಮರಸ್ಯ ಹಾಳು ಮಾಡುತ್ತ ಒಕ್ಕೂಟ ವ್ಯವಸ್ಥೆಗೆ ಕಳಂಕ ತರುತ್ತಿರುವ ಎಂಇಎಸ್ ನಂತಹ ಕಿಡಿಗೇಡಿ ಸಂಘಟನೆಯ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಎಚ್ಚರಿಸಿದ್ದಾರೆ.
ಬೆಳಗಾವಿಯ ಅನಗೋಳದಲ್ಲಿರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ ನಂತರ ಮಾತನಾಡಿದ ಸಚಿವರು, ಸಂಗೊಳ್ಳಿ ರಾಯಣ್ಣ ಮಹಾನ್ ದೇಶಭಕ್ತ, ದೇಶದ ಹೆಮ್ಮೆ, ಸ್ವಾಭಿಮಾನದ ಪ್ರತೀಕ,ಮಹಾನ್ ಯೋಧ-ಅಂತಹ ಸೇನಾನಿಯನ್ನು ಅವಮಾನಿಸುವುದು ಎಂದರೆ ಅದು ದೇಶಕ್ಕೆ ಮಾಡಿದ ಅವಮಾನ. ಹಾಗಾಗಿ, ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತಗೆದುಕೊಂಡಿದ್ದು ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜ-ಈ ಎಲ್ಲರೂ ದೇಶದ ಒಳಿತಿಗಾಗಿ ದುಡಿದವರು ಎನ್ನುವುದನ್ನು ಅರಿತು ನಾವೆಲ್ಲರೂ ಪರಸ್ಪರ ಸಹೋದರ ಭಾವದಿಂದ ಕೆಲಸ ಮಾಡಬೇಕಿದೆ ಎಂದು ಸಚಿವ ಎಂಟಿಬಿ ನಾಗರಾಜು ಕಿವಿ ಮಾತು ಹೇಳಿದರು.
ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರುರಾಣಿ ಚೆನ್ನಮ್ಮ ಅವರ ಪ್ರತಿಮೆ ಅನಾವರಣ ಮಾಡುವ ಮುಖ್ಯಮಂತ್ರಿಗಳ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಸಚಿವ ಎಂಟಿಬಿ ನಾಗರಾಜು ತಿಳಿಸಿದರು.
ಮತಾಂತರ ನಿಷೇಧ ಕಾಯ್ದೆ ಬೆಂಬಲಿಸಿ; ಬಿಎಸ್ ವೈ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ