ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ 35 ಜನ ಪಾಲಿಕೆ ಸದಸ್ಯರಿಗೆ ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿದರು.
ಬೆಳಗಾವಿಯ ಹಿಂದವಾಡಿ ಮಹಾವೀರ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೂತನ ಪಾಲಿಕೆ ಸದಸ್ಯರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಉಮೇಶ ಕತ್ತಿ, ಗೋವಿಂದ ಕಾರಜೋಳ, ಬೈರತಿ ಬಸವರಾಜ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ ಕಟಿಲ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೆ ಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಆನಂದ್ ಮಾಮನಿ, ಮಹಾಂತೇಶ ಕವಟಗಿಮಠ , ದುರ್ಯೋಧನ ಐಹೊಳೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಇ ಲೈಬ್ರರಿ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ